ಒಂದು ಸೆಲ್ಫಿ ಕೊಡಿ ಅಂತ ಬಂದ ಅಭಿಮಾನಿಯ ಜೋತೆ ರಮ್ಯ ನಡೆದುಕೊಂಡ ರೀತಿ ನಿಜಕ್ಕೂ ಆಶ್ಚರ್ಯ

ಅಪ್ಪು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಮೇಲಿಂದ ಇಲ್ಲಿನವರಿಗೂ ಕೂಡ ಕನ್ನಡ ಚಿತ್ರರಂಗದ ಅನಭಿಶಕ್ತ ರಾಣಿಯಾಗಿ ನಟಿ ರಮ್ಯಾ ಕಾಣಿಸಿಕೊಂಡಿದ್ದಾರೆ. ಅವರು ನಟಿಸಿದರು ನಟಿಸದಿದ್ದರೂ ಕೂಡ ಇದುವರೆಗೂ ಅವರ ಅಭಿಮಾನಿಗಳ ಸಂಖ್ಯೆ ಕನ್ನಡ ಚಿತ್ರರಂಗದಲ್ಲಿ ಕಡಿಮೆ ಆಗಿಲ್ಲ ಎಂದು ಹೇಳಬಹುದಾಗಿದೆ. ಇನ್ನು ಇಂದಿಗೂ ಕೂಡ 25ರ ಹರೆಯದ ಯುವತಿಯಂತೆ ಸುಂದರವಾಗಿ ಕಾಣಿಸುತ್ತಾರೆ ನಮ್ಮೆಲ್ಲರ ನೆಚ್ಚಿನ ರಮ್ಯಾ.

ಇನ್ನು ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಿಂದ ದೂರವಿದ್ದ ನಟಿ ರಮ್ಯಾ ಅವರು ಇತ್ತೀಚಿಗಷ್ಟೇ ತಮ್ಮ ಸ್ವಂತ ನಿರ್ಮಾಣ ಸಂಸ್ಥೆಯಾಗಿರುವ ಆಪಲ್ ಸ್ಟುಡಿಯೋ ಸಂಸ್ಥೆಯ ಮೂಲಕ ನಿರ್ಮಾಣ ಆಗಲಿರುವ ಹಾಗೂ ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದಲ್ಲಿ ನಾಯಕಿಯಾಗಿ ಮತ್ತೆ ಕನ್ನಡ ಚಿತ್ರರಂಗಕ್ಕೆ ರಮ್ಯಾ ಅವರು ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಹಲವಾರು ವರ್ಷಗಳಿಂದ ರಮ್ಯಾ ಅವರ ಕಂಬ್ಯಾಕ್ ಅನ್ನು ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಇದೊಂದು ಅತ್ಯಂತ ಸಿಹಿಯಾದ ಸುದ್ದಿಯಾಗಿದೆ.

ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಾಯಕನಟಿ ರಮ್ಯಾ ಎಂದು ಯಾವುದೇ ಅನುಮಾನವಿಲ್ಲದೆ ಹೇಳಬಹುದಾಗಿದೆ. ನಟಿ ರಮ್ಯಾ ಅವರು ಸದ್ಯಕ್ಕೆ ಕನ್ನಡ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿದ್ದು ಇನ್ನಷ್ಟು ಸಿನಿಮಾಗಳಲ್ಲಿ ಅವರು ನಟಿಸುತ್ತಾರೆ ಎಂಬುದಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಇನ್ನು ಇತ್ತೀಚೆಗಷ್ಟೇ ಅವರ ಬಗ್ಗೆ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಹೌದು ಗೆಳೆಯರೇ ರಮ್ಯಾ ಅವರು ಮಾಲ್ ನಲ್ಲಿ ಇದ್ದ ಸಂದರ್ಭದಲ್ಲಿ ಅಭಿಮಾನಿಗಳು ಅವರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬೀಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಒಬ್ಬ ಅಭಿಮಾನಿ ಸೆಲ್ಫಿ ತೆಗೆದುಕೊಳ್ಳಲು ಬಂದಾಗ ಬಾಡಿಗಾರ್ಡ್ ಕೊಂಚಮಟ್ಟಿಗೆ ದೂರಕ್ಕೆ ತಳ್ಳಿದಾಗ ರಮ್ಯಾ ಅವರು ಮತ್ತೆ ಆತನನ್ನು ಕರೆದು ಸೆಲ್ಫಿ ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತಾರೆ. ಇದು ಅಭಿಮಾನಿಗಳ ಮೇಲೆ ರಮ್ಯಾ ಅವರು ಇಟ್ಟಿರುವ ಪ್ರೀತಿಗೆ ಒಂದು ಉತ್ತಮ ಉದಾಹರಣೆಯಾಗಿದೆ ಎಂದರೆ ತಪ್ಪಾಗಲಾರದು. ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ತಪ್ಪದೇ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave a Comment

error: Content is protected !!