Kabzaa: ಕಬ್ಜಾ ಸಿನಿಮಾದಲ್ಲಿ ನಟಿಸಲು ಉಪ್ಪಿ ಶಿವಣ್ಣ ಕಿಚ್ಚ ಪಡೆದ ಸಂಭಾವನೆ ಎಷ್ಟು ಕೋಟಿ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Kabzaa ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗಿರುವಂತಹ ಕಬ್ಜಾ ಸಿನಿಮಾ(Kabzaa Cinema) ಈಗಾಗಲೇ ಬಿಡುಗಡೆಯಾಗಿ ರಾಜ್ಯಾದ್ಯಂತ ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಪ್ರದರ್ಶನ ಕಾಣುತ್ತಿದ್ದು ಕೆಲವೊಂದು ಕಡೆಗಳಲ್ಲಿ ಒಳ್ಳೆಯ ಗುಣಮಟ್ಟದ ಪ್ರತಿಕ್ರಿಯೆ ಸಿಗುತ್ತಿದ್ದರೆ ಇನ್ನು ಕೆಲವು ಕಡೆಗಳಲ್ಲಿ ಸಿನಿಮಾದ ಕುರಿತಂತೆ ಕಳಪೆ ಪ್ರತಿಕ್ರಿಯೆ ಸಿಗುತ್ತದೆ. ತಾರೆ ಸಿನಿಮಾ ಎನ್ನುವುದು ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡರು ಕೂಡ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ರಿಪೋರ್ಟ್ ಅನ್ನು ಪಡೆಯುತ್ತಿದೆ.

ಇನ್ನು ಎಲ್ಲದಕ್ಕಿಂತ ಪ್ರಮುಖವಾಗಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗಿರುವಂತಹ ಸಿನಿಮಾದಲ್ಲಿ ತಾರಾ ಗಣವು ಕೂಡ ತುಂಬಿ ತುಳುಕುತ್ತಿದ್ದು ಈ ಸಿನಿಮಾದಲ್ಲಿ ಪ್ರಮುಖ ಕಲಾವಿದರು ಎಷ್ಟು ಸಂಭಾವನೆ ಪಡೆದುಕೊಂಡಿದ್ದಾರೆ ಎಂಬುದನ್ನು ಸಂಪೂರ್ಣ ವಿವರವಾಗಿ ತಿಳಿಯೋಣ ಬನ್ನಿ. ಮೊದಲಿಗೆ ನಾಯಕ ನಟ ಆಗಿರುವ ಉಪೇಂದ್ರ(Upendra) ಅವರು ಕೇವಲ ಏಳು ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಇನ್ನು ಚಿತ್ರದಲ್ಲಿ ಭಾರ್ಗವ ಬಕ್ಷಿ ಎನ್ನುವ ಪೊಲೀಸ್ ಕಮಿಷನರ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Kiccha Sudeep) ರವರು 5 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಶಿವಣ್ಣ(Shivanna) ಕೂಡ 2.5 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ ಎನ್ನುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಇನ್ನು ಚಿತ್ರದ ನಾಯಕ ನಟಿ ಶ್ರೀಯಾ ಸರಣ್(Shriya Saran) ಅವರು ಎಷ್ಟು ಸಂಭಾವನೆಯನ್ನು ಪಡೆದುಕೊಂಡಿದ್ದಾರೆ ಎನ್ನುವುದನ್ನು ಸಂಪೂರ್ಣ ವಿವರವಾಗಿ ತಿಳಿಯೋಣ.

ನಾಯಕಿಯಾಗಿ ಕಾಣಿಸಿಕೊಂಡಿರುವ ಶ್ರೇಯಾ ಸರಣ್ ರವರು ಭರ್ಜರಿ 1.5 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ ಎನ್ನುವದಾಗಿ ಕೂಡ ತಿಳಿದು ಬಂದಿದ್ದು ಇನ್ನೂ ಉಳಿದ ಕಲಾವಿದರು ಕೂಡ ದೊಡ್ಡ ಮಟ್ಟದ ಸಂಭಾವನೆಯನ್ನು ಪಡೆದುಕೊಂಡಿದ್ದಾರೆ ಎನ್ನುವುದಾಗಿ ಮಾಹಿತಿ ಸಿಕ್ಕಿದೆ. ಸಿನಿಮಾ ಕೂಡ ಭರ್ಜರಿಯಾಗಿ ಮೂಡಿ ಬಂದಿದ್ದು 100 ಕೋಟಿ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ಮೂಡಿ ಬಂದಿದೆ ಎಂಬುದಾಗಿ ತಿಳಿದು ಬಂದಿದೆ‌.

Leave a Comment

error: Content is protected !!