Shakthi Yojane: ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಪ್ರಾರಂಭ.

Shakthi Yojane ಅಂತು ಇಂತು ಕೊನೆಗೂ ಕಾಂಗ್ರೆಸ್ ಸರ್ಕಾರ(Congress Sarkara) ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ವಾಗ್ದಾನವನ್ನು ಪೂರೈಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದ್ದು ಅದರಲ್ಲೂ ವಿಶೇಷವಾಗಿ ಇಂದಿನಿಂದ ರಾಜ್ಯಾದ್ಯಂತ ಪ್ರತಿಯೊಂದು ಜಿಲ್ಲೆಗಳಲ್ಲಿ ಕೂಡ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುವಂತಹ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಹಾಗೂ ಸಾರಿಗೆ ಸಚಿವ ಆಗಿರುವಂತಹ ರಾಮಲಿಂಗ ರೆಡ್ಡಿ ಅವರ ಸಮ್ಮುಖದಲ್ಲಿ ಈ ಯೋಜನೆಯನ್ನು ವಿದ್ಯುಕ್ತವಾಗಿ ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಯಿತು. ಸ್ಮಾರ್ಟ್ ಕಾರ್ಡ್ ಅನ್ನು ಈ ಯೋಜನೆ ಪಡೆಯಲು ಸೇವಾ ಸಿಂಧು ಪೋರ್ಟಲ್ ನಲ್ಲಿ ರಿಜಿಸ್ಟರ್ ಮಾಡುವ ಮೂಲಕ ಪಡೆದುಕೊಳ್ಳಬಹುದಾಗಿದೆ.

ಶಕ್ತಿ ಯೋಜನೆಯ(Shakthi Yojane) ಸ್ಮಾರ್ಟ್ ಕಾರ್ಡ್ ಅನ್ನು ಪಡೆಯುವವರೆಗೂ ಆಧಾರ್ ಕಾರ್ಡ್ ಅಥವಾ ನಿಮ್ಮ ಗುರುತು ಪತ್ರದ ಚೀಟಿಗಳನ್ನು ಕೂಡ ತೋರಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂಬುದಾಗಿ ಅಧಿಕೃತ ಸಾರಿಗೆ ಮೂಲಗಳು ತಿಳಿಸಿದ್ದು ಇದು ಕೂಡ ನಿಮಗೆ ನಿರಾಳತೆಯನ್ನು ತಂದು ಕೊಡಲಿದೆ.

ಈ ಮೂಲಕ ಶಾಲಾ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಹೆಣ್ಣು ಮಕ್ಕಳು ಸರ್ಕಾರಿ ಬಸ್ಸುಗಳಲ್ಲಿ ಉಚಿತ ಬಸ್ ಪ್ರಯಾಣವನ್ನು ಪಡೆಯಬಹುದಾಗಿತ್ತು ಇದು ಅವರ ಪ್ರಯಾಣದ ಖರ್ಚುಗಳನ್ನು ಉಳಿಸಲಿದೆ ಎನ್ನುವುದಾಗಿ ಸರ್ಕಾರ ನಂಬಿದ್ದು ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave A Reply

Your email address will not be published.