ಸರ್ಕಾರಿ ನೌಕರರಿಗೆ ಕೊನೆಗೂ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ

ರಾಜ್ಯದ ಮುಖ್ಯಮಂತ್ರಿಗಳಾಗಿರುವ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ನೌಕರರಿಗೆ ಒಂದು ಅದ್ಭುತ ಆಫರ್ ನೀಡಿದ್ದಾರೆ ಎಂಬುದಾಗಿ ಇತ್ತೀಚಿಗಷ್ಟೇ ತಿಳಿದು ಬಂದಿದೆ. ರಾಜ್ಯದ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ನೌಕರರಿಗೆ ನೀಡುವ ರೀತಿಯಲ್ಲಿಯೇ ಏಳನೇ ವೇತನ ನೀಡುವ ಸಮಿತಿಯನ್ನು ಇದೆ ಅಕ್ಟೋಬರ್ ತಿಂಗಳಲ್ಲಿ ರಚನೆ ಮಾಡುವುದಾಗಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಇತ್ತೀಚಿಗಷ್ಟೇ ರಾಜ್ಯದ ರಾಜಧಾನಿ ಆಗಿರುವ ಬೆಂಗಳೂರಿನಲ್ಲಿ ಮಾತನಾಡಿರುವ ರಾಜ್ಯದ ಮುಖ್ಯಮಂತ್ರಿಗಳಾಗಿರುವ ಬಸವರಾಜ ಬೊಮ್ಮಾಯಿ ರವರು ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ನೌಕರರ ಕಾರ್ಯ ತತ್ಪರತೆಗೆ ಮೆಚ್ಚುಗೆಯನ್ನು ಕೂಡ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಎಲ್ಲವನ್ನು ತೊರೆದು ಸರ್ಕಾರಿ ಕೆಲಸ ದೇವರ ಕೆಲಸ ಎಂಬುದಾಗಿ ದುಡಿಯುತ್ತಿದ್ದೀರಿ.

ನಿಮ್ಮ ಹಾಗೂ ನಿಮ್ಮ ಕುಟುಂಬದ ರಕ್ಷಣೆ ನಮ್ಮ ಸರ್ಕಾರದ ಹೊಣೆ ಎಂಬುದಾಗಿ ಬಸವರಾಜ ಬೊಮ್ಮಾಯಿ ರವರು ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೂಡ ಜಾರಿಗೆ ತರುವುದಾಗಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.

ರಾಜ್ಯದ ಸರ್ಕಾರಿ ನೌಕರರು ರಾಜ್ಯದ ಮುಖ್ಯಮಂತ್ರಿಗಳಿಂದ ಈ ಮಾತನ್ನು ಕೇಳಬೇಕೆಂದು ಹಲವಾರು ಸಮಯಗಳಿಂದ ಕಾಯುತ್ತಿದ್ದರು. ಕೊನೆಗೂ ಕೂಡ ಮುಖ್ಯಮಂತ್ರಿಗಳು ಈ ಕುರಿತಂತೆ ಇತ್ತೀಚಿಗಷ್ಟೇ ಬೆಂಗಳೂರಿನ ಬಂಕ್ವೇಟ್ ಹಾಲ್ ನಲ್ಲಿ ನಡೆದ ಸರ್ವೋತ್ತಮ ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಬಂಪರ್ ನ್ಯೂಸ್ ನೀಡಿದ್ದಾರೆ ಎಂದು ಹೇಳಬಹುದಾಗಿದೆ.

Leave A Reply

Your email address will not be published.